ಸೋಮವಾರ, ಮೇ 23, 2022
30 °C

ಸಾಗರ: ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಇಲ್ಲಿನ ಪೊಲೀಸರು ಬಂಧಿತರಿಂದ ₹ 30.50 ಲಕ್ಷ ಮೌಲ್ಯದ 22 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಹಾವೇರಿಯ ಸುದೀಪ್ ಅಲಿಯಾಸ್‌ ಚೂಪಾ, ಅಜಯ್ ಅಲಿಯಾಸ್‌ ಅಜ್ಜಪ್ಪ, ಗಂಗಾಧರ ಅಲಿಯಾಸ್‌ ಸಂಜು ಬಂಧಿತ ಆರೋಪಿಗಳು. ಕಳವು ಮಾಡಿದ ಬೈಕ್‌ಗಳನ್ನು ಖರೀದಿಸಿದ ಹಾವೇರಿಯ ಗುರುರಾಜ್ ಎಂಬುವವರನ್ನೂ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಸಾಗರ, ಹೊಸನಗರ, ತೀರ್ಥಹಳ್ಳಿ, ಆನವಟ್ಟಿ, ಸೊರಬ, ಶಿರಾಳಕೊಪ್ಪ, ಹಾವೇರಿ, ಕೊಪ್ಪಳ, ಬಳ್ಳಾರಿ ಹಾಗೂ ವಿವಿಧೆಡೆ ಬೈಕ್‌ಗಳನ್ನು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು