ಭಾನುವಾರ, ಜನವರಿ 23, 2022
27 °C

ಶ್ರೀಗಂಧ ಕಳ್ಳರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮದ ಜೆಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ.

ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಬಂಧಿತರು. ಅವರಿಂದ ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಲಯ ಅರಣ್ಯಾಧಿಕಾರಿ ಆರ್. ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಅಶೋಕ್, ಅರಣ್ಯ ರಕ್ಷಕರಾದ ಅಶೋಕ್ ಹಾಗೂ ಸುಮಿತಾ, ಲೋಕೇಶ್ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.