ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಸಮುದಾಯದ ಪ್ರಗತಿಗೆ ಶಿಕ್ಷಣವೇ ಮಾನದಂಡ: ಸಂಸದ ಬಿ.ವೈ.ರಾಘವೇಂದ್ರ

ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕಾರ್ಯಕ್ರಮ
Last Updated 26 ಜೂನ್ 2020, 11:18 IST
ಅಕ್ಷರ ಗಾತ್ರ

ಶಿವಮೊಗ್ಗ: ಯಾವುದೇ ಸಮುದಾಯ ಅಭಿವೃದ್ಧಿಯಾಗಲುವಿದ್ಯಾವಂತರ ಸಂಖ್ಯೆಹೆಚ್ಚಾಗಬೇಕು.ಸಮುದಾಯಗಳ ಪ್ರಗತಿಗೆ ಶಿಕ್ಷಣವೇ ಮಾನದಂಡ ಎಂದುಸಂಸದ ಬಿ.ವೈ.ರಾಘವೇಂದ್ರ ಪ್ರತಿಪಾದಿಸಿದರು.

ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿರುದ್ಯೋಗಿಗಳಿಗೆಹಾಗೂ ಬಡ ವಿದ್ಯಾರ್ಥಿಗಳಿಗೆಆಯೋಜಿಸಿದ್ದ ಸಾಲ ಮಂಜೂರಾತಿ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನಿರುದ್ಯೋಗಿ ಯುವಕರುಆರ್ಥಿಕ ಸ್ವಾವಲಂಬನೆ ಸಾಧಿಸಲು ಕಡಿಮೆ ಬಡ್ಡಿದರದಲ್ಲಿ ಸಾಲ-ಸೌಲಭ್ಯ ನೀಡುತ್ತಿರುವುದು ಸಕಾಲಿಕ, ಅರ್ಥಪೂರ್ಣ. ಕೊರೊನಾ ಸಂಕಷ್ಟದ ಸಮಯದಲ್ಲಿಬದುಕು ಆತಂಕಕ್ಕೆ ಒಳಗಾಗಿದೆ.ಇಂತಹಸಮಯದಲ್ಲಿನಿಗಮದ ಯೋಜನೆಗಳು ಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿವೆ ಎಂದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, ಸಮುದಾಯದ ಉನ್ನತಿಗೆ ಸರ್ಕಾರ ಹೆಚ್ಚುವರಿ ₹50 ಕೋಟಿ ನೀಡಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್,ಸಾಮಾನ್ಯ ಜೀವನ ನಡೆಸುತ್ತಿರುವ ಆರ್ಯವೈಶ್ಯ ಸಮುದಾಯದ ಅಭ್ಯರ್ಥಿಗಳಿಗೆ ನಿಗಮದ ಯೋಜನೆಗಳು ಭರವಸೆಯ ಬೆಳಕಾಗಲಿವೆ ಎಂದರು.

ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್‌, ಒಂದು ಕಾಲದಲ್ಲಿ ಸಮೃದ್ಧವಾಗಿದ್ದ ಸಮುದಾಯಇಂದು ಸಂಕಷ್ಟದಲ್ಲಿದೆ. ಹಲವು ಕುಟುಂಬಗಳಲ್ಲಿ ಬಡತನವಿದೆ. ನಿರುದ್ಯೋಗವಿದೆ. ಸಮುದಾಯದಲ್ಲಿ ಇರುವ ಸಮಸ್ಯೆಗಳಿಗೆ ಪರಿಹಾರವಾಗಿ ರಚನಾತ್ಮಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಈಗಾಗಲೇ ರಾಜ್ಯದ 20 ಜಿಲ್ಲೆಗಳಿಗೆ ಭೇಟಿ ನೀಡಿ ಸಮುದಾಯದ ಜನರ ಅಗತ್ಯ, ಬದುಕು, ವ್ಯವಹಾರ ಅರಿಯುವ ಪ್ರಯತ್ನ ಮಾಡಲಾಗಿದೆ. ಸರ್ಕಾರದ ಸಹಕಾರ ಪಡೆದು, ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಪಾಲಿಕೆ ಮೇಯರ್ ಶ್ರೀಮತಿ ಸುವರ್ಣಾಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಕೆ.ಶಾಂತರಾಜು,ಹೆಚ್ಚುವರಿಜಿಲ್ಲಾಧಿಕಾ ಜಿ.ಅನುರಾಧ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೀತಾ ಜಯಶೇಖರ್, ಚನ್ನಬಸಪ್ಪ, ದತ್ತಾತ್ರಿ, ವೆಂಕಟಸುಬ್ಬಯ್ಯಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT