ಬುಧವಾರ, ಆಗಸ್ಟ್ 4, 2021
23 °C

ಶಿವಮೊಗ್ಗ: ₹ 12 ಸಾವಿರ ಗೌರವಧನಕ್ಕೆ ಆಶಾ ಕಾರ್ಯಕರ್ತೆಯರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಆಶಾ ಕಾರ್ಯಕರ್ತರಿಗೆ ಮಾಸಿಕ ₹ 12 ಸಾವಿರ ಗೌರವಧನ ಖಾತರಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯಕ್ತ ಆಶಾಕಾರ್ಯಕರ್ತೆಯರ ಸಂಘಟನೆ ಸದಸ್ಯರು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.

ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಣಾ ಸಾಮಾಗ್ರಿ ನೀಡಬೇಕು. ಕೋವಿಡ್‌ಗೆ ತುತ್ತಾದ ಕಾರ್ಯಕರ್ತೆಯರಿಗೆ ಪರಿಹಾರ, ಸಂಪೂರ್ಣ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.

ಸಂಪೂರ್ಣ ಸೇವೆ ಸ್ಥಗಿತಗೊಳಿಸಿರುವ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಂಡಿದ್ದಾರೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಈ ಹಿಂದೆಯೇ ಹಲವು ಬಾರಿ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿಲ್ಲ. ಈಚೆಗೆ ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಡಿದ ಉತ್ತಮ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕೊರೋನಾ ತಡೆ ಯಶಸ್ಸಿಗೆ ನೀಡಿದ ಕೊಡುಗೆ ಶ್ಲಾಘಿಸಲಾಗಿದೆ ಎಂದರು.

ವೇತನವಿಲ್ಲದೇ, ರಕ್ಷಣೆ ಇಲ್ಲದೇ ಬಳಲಿ ಬೆಂಡಾಗಿದ್ದಾರೆ. ದುಡಿಮೆಗೆ ತಕ್ಕ ಪ್ರತಿಫಲವಿಲ್ಲದೇ ಅನಿಶ್ಚಿತ ವೇತನ ಪಡೆಯುತ್ತಿದ್ದಾರೆ. ಬದುಕು ಸಂಕಷ್ಟದಲ್ಲಿದೆ. ಸರ್ಕಾರ  ಗೌರವಧನ, ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ₹ 12 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು