ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನುವಾರು ಸಾಗಣೆ; ವ್ಯಕ್ತಿ ಮೇಲೆ ಹಲ್ಲೆ: ಮೂವರ ಬಂಧನ

Published 2 ಜೂನ್ 2023, 20:11 IST
Last Updated 2 ಜೂನ್ 2023, 20:11 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ಸಮೀಪದ ಮಂಚಿಕೊಪ್ಪ ಗ್ರಾಮದ ಬಳಿ ಶುಕ್ರವಾರ ಜಾನುವಾರುಗಳನ್ನು ಅನಧಿಕೃತವಾಗಿ ಸಾಗಿಸುತ್ತಿದ್ದ ದಾದಾಪೀರ್ ಎಂಬುವವರ ಮೇಲೆ ಯುವಕರ ತಂಡವೊಂದು ಹಲ್ಲೆ ಮಾಡಿದೆ.

ದಾದಾಪೀರ್ ಅವರು ಗೂಡ್ಸ್‌ ಆಟೊದಲ್ಲಿ ಶಿರಾಳಕೊಪ್ಪದಿಂದ ಚಿಕ್ಕಜಂಬೂರು ಗ್ರಾಮಕ್ಕೆ ಎರಡು ಎತ್ತುಗಳನ್ನು ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದ ಮಂಚಿಕೊಪ್ಪದಲ್ಲಿ ಯುವಕರ ತಂಡ ವಾಹನ ತಡೆದಿದೆ. ಈ ವೇಳೆ ದಾದಾಪೀರ್ ಮೇಲೆ ಹಲ್ಲೆ ಮಾಡಿದ್ದಾಗಿ ತಿಳಿದುಬಂದಿದೆ.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಮಾಡಿದ 9 ಜನರ ಪೈಕಿ ಪ್ರಮೋದ್, ಶಿವು, ಸುನೀಲ್ ಅವರನ್ನು ಬಂಧಿಸಲಾಗಿದೆ. ಉಳಿದವರು ನಾಪತ್ತೆಯಾಗಿದ್ದಾರೆ.

ಸ್ವಯಂಪ್ರೇರಿತ ಪ್ರಕರಣ ದಾಖಲು: ಗೂಡ್ಸ್‌ ಆಟೊದಲ್ಲಿ ಸೂಕ್ತ ದಾಖಲೆ ಇಲ್ಲದೆ, ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ದಾದಾಪೀರ್ ಅವರ ವಿರುದ್ಧವೂ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT