ಭದ್ರಾವತಿ: ತಂದೆ ಮಾಡಿದ ಸಾಲಕ್ಕೆ ಮಗನ ಮೇಲೆ ಹಲ್ಲೆ ಮಾಡಲಾಗಿದ್ದು, ಮನನೊಂದ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೇಪರ್ ಟೌನ್‌ನಲ್ಲಿ ಬುಧವಾರ ನಡೆದಿದೆ.
ಸ್ಟೀವನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಪೇಪರ್ ಟೌನ್ ನಿವಾಸಿ ಜೋಸೆಫ್ ಪರಶುರಾಮ್ ಅವರ ಬಳಿ ₹ 2 ಲಕ್ಷ ಸಾಲ ಪಡೆದಿದ್ದರು. ಸಾಲ ಪಡೆದುಕೊಂಡು ತೀರಿಸಲಾಗದೇ ಜೋಸೆಫ್ ಮನೆ ಬಿಟ್ಟು ಹೋಗಿದ್ದರು.
ಸಾಲ ವಸೂಲಿಗಾಗಿ ಮಗ ಸ್ಟೀವನ್‌ನನ್ನು ಕರೆದುಕೊಂಡು ಹೋದ ಪರಶುರಾಮ್ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶುಕ್ರವಾರ ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾಧಿಕಾರಿ ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.