ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊರಬ | ಬಾಲಕಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ

Published 18 ಏಪ್ರಿಲ್ 2024, 14:18 IST
Last Updated 18 ಏಪ್ರಿಲ್ 2024, 14:18 IST
ಅಕ್ಷರ ಗಾತ್ರ

ಸೊರಬ: ಪ್ರೀತಿ ಮಾಡುವುದಾಗಿ ನಂಬಿಸಿ, ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಪ್ರಯತ್ನಿಸಿದ ಘಟನೆ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಅಗಸನಹಳ್ಳಿ ಗ್ರಾಮದ ರವಿ ಎಂಬ ಯುವಕ ಅದೇ ಗ್ರಾಮದ ಬಾಲಕಿಗೆ ಪ್ರೀತಿ, ಪ್ರೇಮದ ಹೆಸರಿನಲ್ಲಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿಯನ್ನು ಪುಸಲಾಯಿಸಿ ಕಾಡಿಗೆ ಕರೆದುಕೊಂಡು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ನಂತರ ಬಾಲಕಿಯನ್ನು ದೂರದ ಸಂಬಂಧಿಕರ ಮನೆಯಲ್ಲಿ ಇರಿಸಿ ಪರಾರಿಯಾಗಿದ್ದಾನೆ‌.

ಈ ಸಂಬಂಧ ಬಾಲಕಿಯ ತಾಯಿ ಆನವಟ್ಟಿ ಪೊಲೀಸ್ ಠಾಣೆಗೆ ನೀಡಿದ ದೂರಿನ‌ ಮೇರೆಗೆ ಆರೋಪಿ ರವಿಯನ್ನು ಪೋಕ್ಸೊ ಕಾಯ್ದೆಯಡಿ ಪೊಲೀಸರು ಬುಧವಾರ ಬಂಧಿಸಿ‌ ನ್ಯಾಯಾಂಗ‌‌‌ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT