ಬುಧವಾರ, ಜನವರಿ 20, 2021
17 °C

ತೋಟಗಾರ್ಸ್ ಸೊಸೈಟಿಯಲ್ಲಿ ಕಳವಿಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ನಗರದ ಕೆಳದಿ ರಸ್ತೆಯಲ್ಲಿರುವ ತೋಟಗಾರ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಿಟಕಿಯ ರಾಡ್ ಕತ್ತರಿಸಿ ಒಳಕ್ಕೆ ನುಗ್ಗಿರುವ ಕಳ್ಳರು ಕಳವಿಗೆ ಪ್ರಯತ್ನ ನಡೆಸಿದ್ದಾರೆ.

ಶುಕ್ರವಾರ ತಡರಾತ್ರಿ ಸೊಸೈಟಿಯ ಕಚೇರಿಯ ಒಳಕ್ಕೆ ನುಗ್ಗಿ ಹಣಕ್ಕಾಗಿ ಹುಡುಕಿದ ಕಳ್ಳರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಕಚೇರಿಯಲ್ಲಿದ್ದ ಒಂದು ಮೊಬೈಲ್‌ ಅನ್ನು ತೆಗೆದುಕೊಂಡು ಹೋಗಿರುವ ಕಳ್ಳರು ಅಲ್ಲಿದ್ದ ಲ್ಯಾಪ್‌ಟಾಪ್ ಅನ್ನು ಕಚೇರಿ ಹಿಂಭಾಗದಲ್ಲಿ ಎಸೆದಿದ್ದಾರೆ.

ಸೊಸೈಟಿಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ಎರಡು ದಿನಗಳ ಹಿಂದಷ್ಟೆ ಹಾಳಾಗಿದ್ದು, ಅದನ್ನು ರಿಪೇರಿಗೆ ಕಳುಹಿಸಿದ ಸಂದರ್ಭದಲ್ಲೆ ಕಳುವಿಗೆ ಯತ್ನ ನಡೆದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು