ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಬಿಇಒ ನಾಗರಾಜ್‌ಗೆ ರಾಷ್ಟ್ರಪ್ರಶಸ್ತಿಯ ಗರಿ

Published 8 ಡಿಸೆಂಬರ್ 2023, 15:58 IST
Last Updated 8 ಡಿಸೆಂಬರ್ 2023, 15:58 IST
ಅಕ್ಷರ ಗಾತ್ರ

ಶಿವಮೊಗ್ಗ :  ಶಿಕ್ಷಣ ಇಲಾಖೆಯಲ್ಲಿ ರಚನಾತ್ಮಕ, ಕ್ರಿಯಾಶೀಲ ಹಾಗೂ ಪ್ರೇರಣಾತ್ಮಕ ಶೈಕ್ಷಣಿಕ ಚಟುವಟಿಕೆಗೆ ನೀಡಲಾಗುವ ನ್ಯಾಷನಲ್ ಇನ್ನೋವೇಟಿವ್ ಅವಾರ್ಡ್‌ಗೆ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಭಾಜನರಾಗಿದ್ದಾರೆ.

ನಗರದ ಬಿ.ಎಚ್.ರಸ್ತೆಯಲ್ಲಿನ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರಿಗೆ ಶಿವಮೊಗ್ಗ ತಾಲ್ಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ವಿವಿಧ ವೃಂದ ಸಂಘಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಮಾತನಾಡಿ, ತಮ್ಮ ಕಾರ್ಯವ್ಯಾಪ್ತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ, ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದಿರುವುದು ಇಲಾಖೆಗೆ ಮಾತ್ರವಲ್ಲ ಜಿಲ್ಲೆಗೆ ಸಂದ ಗೌರವವಾಗಿದೆ ಎಂದರು.
 
ಈ ಸಂದರ್ಭದಲ್ಲಿ ವಿವಿಧ ಶಿಕ್ಷಕರ ವೃಂದ ಸಂಘಗಳ ಅಧ್ಯಕ್ಷರಾದ ಬಿ.ಸಿದ್ಧಬಸಪ್ಪ, ಡಿ.ಬಿ.ರುದ್ರಪ್ಪ, ದಿನೇಶ್ ಉಪಸ್ಥಿತರಿದ್ದರು. 

ಇತ್ತೀಚೆಗೆ ದೆಹಲಿಯ ಡಾ. ಬಿ.ಆರ್.ಅಂಬೇಡ್ಕರ್ ಭೀಮಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಇನ್ನೋವೇಟಿವ್ ಪುರಸ್ಕಾರ ಸಮಾರಂಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರಪ್ರಧಾನ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT