ಗುರುವಾರ , ಮೇ 26, 2022
30 °C

ಸ್ವಾಮಿನಾಥ ಗೋಪಾಲ್ ರಾವ್, ಜಗದೀಶ್‌ಗೆ ಮಾನಸ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಇಲ್ಲಿನ ಮಾನಸ ಟ್ರಸ್ಟ್‌ ಡಾ.ಕಟೀಲ್ ಅಶೋಕ್ ಪೈ ಸ್ಮರಣಾರ್ಥ ನೀಡುವ ಮಾನಸ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ಮನೋವೈದ್ಯ ಡಾ.ಸ್ವಾಮಿನಾಥ ಗೋಪಾಲರಾವ್, ನಿಮ್ಹಾನ್ಸ್ ಪ್ರಾಧ್ಯಾಪಕ ಡಾ.ಜಗದೀಶ್ ತೀರ್ಥಹಳ್ಳಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ತಲಾ ₹ 75 ಸಾವಿರ ನಗದು, ಫಲಕ ಒಳಗೊಂಡಿದೆ. ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಫೆ.20ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಬರಹಗಾರ ಜಯಂತ್ ಕಾಯ್ಕಿಣಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ಟ್ರಸ್ಟ್‌ ನಿರ್ದೇಶಕ ಡಾ.ರಾಜೇಂದ್ರ ಚೆನ್ನಿ ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.