ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಮೀರಿ ಎಂಜಿನಿಯರ್‌ಗಳಿಗೆ ಬಡ್ತಿ?

Last Updated 8 ಮೇ 2020, 20:23 IST
ಅಕ್ಷರ ಗಾತ್ರ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಡ್ತಿ ನೀಡಲು, ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಲು ಸಿದ್ಧತೆ ನಡೆದಿದೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಆರೋಪಿಸಿದರು.

‘ಸೇವಾ ಹಿರಿತನ ಕಡೆಗಣಿಸಿ ಸಹಾಯಕ ಎಂಜಿನಿಯರ್ ಹುದ್ದೆಯಿಂದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗೆಬಡ್ತಿ ನೀಡಲು ಹೊರಟಿದ್ದಾರೆ. ನಿವೃತ್ತಿ ಅಂಚಿನಲ್ಲಿರುವಅಧೀನ ಕಾರ್ಯದರ್ಶಿಯೊಬ್ಬರುಸೇವೆಯ ಕೊನೆಗಾಲದಲ್ಲಿ ಒಂದಷ್ಟು ಗಂಟು ಮಾಡಿಕೊಳ್ಳಲು ಹೊರಟಿದ್ದಾರೆ. ಈ ನಡೆಯಲ್ಲಿ ಭ್ರಷ್ಟಾಚಾರದ ವಾಸನೆ ಕಾಣುತ್ತಿದೆ. ಇದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೂ ಕೆಟ್ಟ ಹೆಸರು ತರುತ್ತದೆ. ಸರ್ಕಾರವೂ ತಲೆತಗ್ಗಿಸಬೇಕಾಗುತ್ತದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.

‘ಸೇವಾ ಹಿರಿತನವನ್ನು ಕಡೆಗಣಿಸಿ ಈಗ ಮೂರ್‍ನಾಲ್ಕು ವರ್ಷಗಳ ಹಿಂದೆ ಕೆಲಸಕ್ಕೆ ಸೇರಿದವರಿಗೂ ಬಡ್ತಿ ನೀಡಲು ಹೊರಟಿದ್ದಾರೆ. ಅವರಲ್ಲಿ ಕೆಲವರು ಪ್ರೊಬೇಷನರಿಅವಧಿಯನ್ನೂ ಮುಗಿಸಿಲ್ಲ.ಬಡ್ತಿ ನೀಡುವ ಕುರಿತು ಮೇ 7ರಂದು ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಭೆಯನ್ನೂ ನಡೆಸಲಾಗಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT