ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಚೇತನ, ಮಹಾ ಅಭಿಯಾನ ಆರಂಭ: ಬಿ.ವೈ. ರಾಘವೇಂದ್ರ

Published 29 ಆಗಸ್ಟ್ 2023, 6:12 IST
Last Updated 29 ಆಗಸ್ಟ್ 2023, 6:12 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ, ಮತದಾರರ ಚೇತನ ಮಹಾ ಅಭಿಯಾನ ಹಮ್ಮಿಕೊಂಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಜೊತೆಗೆ ಹೊಸ ಮತದಾರರ ಸೇರ್ಪಡೆಯನ್ನು ಈ ಅಭಿಯಾನದ ಮೂಲಕ ನಡೆಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆ, ವಿಧಾನಸಭೆ ಮತ್ತು ಶಕ್ತಿ ಕೇಂದ್ರಗಳಲ್ಲಿ ಸಮಿತಿಗಳ ರಚಿಸಲಾಗಿದೆ. ವಿಧಾನಸಭಾ ಮಟ್ಟದಲ್ಲಿ ಬಿಎಲ್‌ಎ-1, ಬಿಎಲ್‌ಎ-2 ನೇಮಕವಾಗಿದೆ. ಶಕ್ತಿ ಕೇಂದ್ರ ಮಟ್ಟದಲ್ಲಿ ಕಾರ್ಯಾಗಾರ ನಡೆದಿವೆ ಎಂದರು.

ಅಭಿಯಾನದ ಅಂಗವಾಗಿ ಪಕ್ಷದ ಕಾರ್ಯಕರ್ತರ ಮನೆ ಮನೆಗೆ ಪ್ರಚಾರ, ಸಾಮಾಜಿಕ ಜಾಲತಾಣಗಳ ಬಳಕೆಯ ಮೂಲಕ ಮತದಾರರನ್ನು ತಲುಪಲಿದ್ದಾರೆ. ಹೊಸ ಮತದಾರರ ಸೇರ್ಪಡೆ ಜೊತೆಗೆ ನಕಲಿ ಮತದಾರರನ್ನು ತೆಗೆಯುವುದು, ವರ್ಗಾವಣೆ ಪ್ರಕ್ರಿಯೆ ಈ ಎಲ್ಲ ಪ್ರಕ್ರಿಯೆಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಪರಿಣಾಮಕಾರಿಯಾಗಿ ಮಾಡಲಿದ್ದಾರೆ ಎಂದರು.
 
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ಶಿವರಾಜ್, ಬಿ.ಕೆ.ಶ್ರೀನಾಥ್, ಜ್ಞಾನೇಶ್ವರ್, ಹೃಷಿಕೇಶ್ ಪೈ, ವೀರಭದ್ರಪ್ಪ ಪೂಜಾರಿ, ಚಂದ್ರಶೇಖರ್, ಮಾಲತೇಶ್, ಅಣ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT