‘ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಊಟ ನೀಡಬೇಕು. ಕೊಠಡಿಯಲ್ಲಿ ಕಿಟಕಿಗಳನ್ನು ದುರಸ್ತಿಗೊಳಿಸಬೇಕು. ಶೌಚಾಲಯದ ಸ್ವಚ್ಛತೆ ಬಗ್ಗೆ ಗಮನಹರಿಸಬೇಕು. ಸರ್ಕಾರ ವಿದ್ಯಾರ್ಥಿ ನಿಲಯಗಳಿಗೆ ಅನುದಾನ ನೀಡುತ್ತಿದ್ದು, ಅನುದಾನ ವಿದ್ಯಾರ್ಥಿಗಳಿಗೆ ತಲುಪುವಂತೆ ಉತ್ತಮ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಬಿ.ವೈ. ವಿಜಯೇಂದ್ರ ಸ್ಥಳದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ ಹಾಗೂ ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ರಜನಿ ಅವರಿಗೆ ಸೂಚಿಸಿದರು.