ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ಅ.30ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭಾಗವಹಿಸುವರು.

‘ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿವಾರು ಸಮೀಕ್ಷೆಯ ವರದಿ ಕೂಡಲೇ ಜಾರಿಗೊಳಿಸಬೇಕು. 2 ‘ಎ’ ಮೀಸಲಾತಿ ಪಟ್ಟಿಗೆ ಆರ್ಥಿಕವಾಗಿ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮುಂದುವರಿದ ಪ್ರಬಲವಾಗಿರುವ ಜಾತಿಗಳನ್ನು ಸೇರಿಸಬಾರದು ಎಂದು ಆಗ್ರಹಿಸಿ ಧರಣಿ ನಡೆಸಲಾಗುತ್ತಿದೆ. ಸುಮಾರು 10 ಸಾವಿರ ಜನರು ಧರಣಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ರಾಜ್ಯ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಮಾಹಿತಿ ನೀಡಿದರು.

ಪ್ರವರ್ಗ 1 ಮತ್ತು 2 ‘ಎ’ನಲ್ಲಿ ಸುಮಾರು 2 ಕೋಟಿ ಜನಸಂಖ್ಯೆ ಇದೆ. ಅವುಗಳ ಅಭಿವೃದ್ಧಿಗೆ ₹ 80 ಕೋಟಿ ಮೀಸಲಿಡಲಾಗಿದೆ. ₹ 20 ಕೋಟಿ ಬಿಡುಗಡೆ ಮಡಲಾಗಿದೆ. ಈ ವರ್ಗಗಳ ಅಭಿವೃದ್ಧಿಗಾಗಿ ದೇವರಾಜು ಅರಸು ಅಭಿವೃದ್ಧಿ ನಿಗಮಕ್ಕೆ ₹ 2 ಸಾವಿರ ಕೋಟಿ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.