ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡ್ಮಿಂಟನ್; ಪವನ್ ಕುಮಾರ್‌ಗೆ ಎರಡು ಚಿನ್ನದ ಪದಕ

Published 2 ಜೂನ್ 2023, 14:54 IST
Last Updated 2 ಜೂನ್ 2023, 14:54 IST
ಅಕ್ಷರ ಗಾತ್ರ

ಭದ್ರಾವತಿ: ನಗರದ ಬ್ಯಾಡ್ಮಿಂಟನ್ ಕ್ರೀಡಾಪಟು ಪವನ್‌ಕುಮಾರ್ ಎರಡು ರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಭಾಗವಹಿಸಿ ಎರಡು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ನವದೆಹಲಿಯ ಜವಾಹರ್‌ಲಾಲ್ ನೆಹರು ಕ್ರೀಡಾಂಗಣದಲ್ಲಿ ಮೇ 24 ರಿಂದ 26ರವರೆಗೆ ನಡೆದ ಎಸ್‌ಬಿಕೆಎಫ್ 8ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಹಾಗೂ ಮೇ 26 ರಿಂದ 29ರವರೆಗೆ ಹರಿಯಾಣದ ಗುರುಗ್ರಾಮ್‌ದಲ್ಲಿ ನಡೆದ ಓಪನ್ ನ್ಯಾಷನಲ್ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಒಂದೇ ತಿಂಗಳಲ್ಲಿ ಎರಡು ರಾಷ್ಟ್ರೀಯ ಟೂರ್ನಿಗಳಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಅವರಿಗೆ ನಗರದ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT