ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗರ್‌ಹುಕುಂ ರೈತರನ್ನು ಒಕ್ಕಲೆಬ್ಬಿಸುವುದಕ್ಕೆ ವಿರೋಧ

Last Updated 24 ಮಾರ್ಚ್ 2023, 5:23 IST
ಅಕ್ಷರ ಗಾತ್ರ

ಸಾಗರ: ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಮಲೆನಾಡು ರೈತ ಹೋರಾಟ ಸಮಿತಿ ಹಾಗೂ ಸಾಗರ ಕ್ಷೇತ್ರ ಅಭಿವೃದ್ಧಿ ಹೋರಾಟ ಸಮಿತಿ ಪ್ರಮುಖರು ಗುರುವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈಚೆಗೆ ಸೊರಬ ತಾಲ್ಲೂಕಿನ ತಾಳಗುಪ್ಪ ಗ್ರಾಮದಲ್ಲಿ ಅರಣ್ಯ ಇಲಾಖೆ ಬೆಳದಿರುವ ಅಡಿಕೆ ಮರಗಳನ್ನು ಕಡಿಯುವ ಮೂಲಕ ಬಗರ್‌ಹುಕುಂ ರೈತರ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನೀಯ. ಇದನ್ನು ನೋಡಿಯೂ ಜನಪ್ರತಿನಿಧಿಗಳು ಅಸಹಾಯಕರಾಗಿರುವುದು ವ್ಯವಸ್ಥೆಯ ದುರಂತ ಎಂದು ಸಮಿತಿಯ ಸಂಚಾಲಕ ತೀ.ನ.ಶ್ರೀನಿವಾಸ್ ಟೀಕಿಸಿದರು.

2012ರಲ್ಲಿ ಸೊರಬದಲ್ಲಿ ಹಾಲಪ್ಪ ಅವರು ಶಾಸಕರಾಗಿದ್ದಾಗ ಪರಿಶಿಷ್ಟ ಜಾತಿಗೆ ಸೇರಿದ 41 ಕುಟುಂಬದವರನ್ನು ಒಕ್ಕಲೆಬ್ಬಿಸಲಾಗಿತ್ತು. ಇದನ್ನು ಪ್ರತಿಭಟಿಸಿದ 61 ಜನರನ್ನು ಜೈಲಿಗೆ ಕಳುಹಿಸಲಾಗಿತ್ತು. ನಂತರ ತಾಳಗುಪ್ಪದ 32 ಕುಟುಂಬದವರನ್ನು ಒಕ್ಕಲೆಬ್ಬಿಸಲಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಯಾವ ಪಕ್ಷದವರೂ ನೊಂದ ರೈತರ ಪರ ನಿಲ್ಲುತ್ತಿಲ್ಲ ಎಂದು ದೂರಿದರು.

ಪ್ರಮುಖರಾದ ಮಹ್ಮದ್ ಖಾಸಿಂ, ವಿಶ್ವನಾಥ ಗೌಡ ಅದರಂತೆ, ಎಲ್.ವಿ.ಸುಭಾಷ್, ಟಿ.ಆರ್.ಕೃಷ್ಣಪ್ಪ, ಚಂದ್ರಪ್ಪ ಆರ್.ಬಿ. ರತ್ನಾಕರ್, ನಟರಾಜ್, ಥಾಮಸ್, ಜೋಸೆಫ್, ರೆಹೆಮತುಲ್ಲಾ, ಟೀಟೂ, ಪರಮೇಶ್ವರ ದೂಗೂರು, ಆರಿಫ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT