ಬುಧವಾರ, ಮೇ 12, 2021
18 °C

ಕಬಡ್ಡಿ ಪಂದ್ಯದ ವೇಳೆ ಹಲ್ಲೆ ಪ್ರಕರಣ: 15 ಮಂದಿಗೆ ಜಾಮೀನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭದ್ರಾವತಿ: ಕನಕಮಂಟಪ ಮೈದಾನದಲ್ಲಿ ಫೆ.28ರಂದು ನಡೆದ ಕಬಡ್ಡಿ ಪಂದ್ಯಾವಳಿ ವೇಳೆಯ ಹಲ್ಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ 15 ಮಂದಿಗೆ ಸೋಮವಾರ ಹೈಕೋರ್ಟ್‌ ಜಾಮೀನು ನೀಡಿದೆ.

ಶಾಸಕ ಬಿ.ಕೆ. ಸಂಗಮೇಶ್ವರ ಅವರ ಪುತ್ರ ಬಸವೇಶ್ ಸೇರಿ 15 ಮಂದಿಯನ್ನು ಘಟನೆ ಸಂಬಂಧ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಪ್ರಕರಣ ಸಂಬಂಧ ತನಿಖಾಧಿಕಾರಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ 22 ಜನರ ಹೆಸರನ್ನು ಉಲ್ಲೇಖಿಸಲಾಗಿತ್ತು. ಪ್ರಕರಣದಲ್ಲಿ ಭಾಗಿಯಾದ ಉಳಿದ 7 ಮಂದಿಗೂ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.