ಶಿವಮೊಗ್ಗ: ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಬಂಜಾರ ಸಮುದಾಯದ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಾತ್ರಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ಈ ವೇಳೆ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.
'ತಪ್ಪು ತಿಳಿವಳಿಕೆಯಿಂದ ಬಂಜಾರ ಸಮುದಾಯದವರು ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಯಾರನ್ನೂ ಬಂಧಿಸಬೇಡಿ ಎಂದು ಮಾಧ್ಯಮಗಳಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ಇಲ್ಲಿ ಸಮುದಾಯದವರನ್ನು ದೊಡ್ಡ ಸಂಖ್ಯೆಯಲ್ಲಿ ವಿಚಾರಣೆ ನೆಪದಲ್ಲಿ ಕರೆದೊಯ್ದು ಬಂಧಿಸಲಾಗಿದೆ. ಪೊಲೀಸರು ಕೂಡ ಈ ಬಗ್ಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಿದವರನ್ನು ಬಂಧಿಸುವ ಮೂಲಕ ಪೊಲೀಸರು ನಮ್ಮ ಮೂಲಭೂತ ಹಕ್ಕನ್ನು ಕಸಿದುಕೊಂಡಿದ್ದಾರೆ' ಎಂದು ಪ್ರತಿಭಟನಾಕಾರರು ದೂರಿದರು.
ಭೋವಿ ಸಮಾಜದ ಮುಖಂಡ ಜಗದೀಶ್, ಬಂಜಾರ ಸಮುದಾಯದ ಮುಖಂಡರಾದ ಖೆಮ್ಯಾನಾಯ್ಕಾ, ವಿನಯ್ ರಾಜಾವತ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.