ಶುಕ್ರವಾರ, ಜೂನ್ 25, 2021
22 °C

ಬಸವಣ್ಣನ ಆದರ್ಶ ಪ್ರತಿಮೆಗಳಲ್ಲೇ ಕಳೆಯಬಾರದು: ರಾಘವೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಬಸವಣ್ಣನವರ ಆದರ್ಶಗಳು ಕಟ್ಟಡ, ಪ್ರತಿಮೆಗಳಲ್ಲೇ ಕಳೆದು ಹೋಗಬಾರದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರಳವಾಗಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಬಸವಣ್ಣ ಅಸಮಾನತೆ ಹೋಗಲಾಡಿಸಿದವರು. ಬಸವತತ್ವದ ಮೂಲಕ ಅಸ್ಪೃಶ್ಯತೆ ಮತ್ತು ಶೋಷಣೆಯ ವಿರುದ್ಧ ಧರ್ಮಕ್ರಾಂತಿ ಮಾಡಿದವರು. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಅವರಿಗೆ ಗೌರವ ನೀಡಬೇಕು ಎಂದರು.

ಭಾರತ ಸರ್ಕಾರ ಲಂಡನ್‌ನಿನ ಲ್ಯಾಂಬೆಕ್ ನಗರದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪಿಸಿತು. ಪ್ರಧಾನಿ ಮೋದಿಬಸವೇಶ್ವರರ ಸಿದ್ದಾಂತಗಳನ್ನು ವಿಶ್ವದಲ್ಲಿಯೇ ಹರಡಿದ್ದಾರೆ. ಕರ್ನಾಟಕ ಸರ್ಕಾರ ಕೂಡ ಬಸವ ಕಲ್ಯಾಣ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದರು.

ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಮೇಯರ್ ಸುನೀತಾ ಅಣ್ಣಪ್ಪ, ಮುಖಂಡರಾದ ಎಸ್.ಎಸ್.ಜ್ಯೋತಿಪ್ರಕಾಶ್, ಎಸ್.ದತ್ತಾತ್ರಿ, ಎನ್.ಜೆ.ರಾಜಶೇಖರ್, ಬಿ.ವೈ.ಅರುಣಾದೇವಿ, ಎಚ್.ಸಿ.ಯೋಗೀಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್,  ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.