ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಪುಸ್ತಕ ಪತ್ರಿಕೆ ಓದಿ; ಜ್ಞಾನಾರ್ಜನೆ ಬೆಳೆಸಿಕೊಳ್ಳಿ’

Published 1 ಫೆಬ್ರುವರಿ 2024, 14:02 IST
Last Updated 1 ಫೆಬ್ರುವರಿ 2024, 14:02 IST
ಅಕ್ಷರ ಗಾತ್ರ

ಭದ್ರಾವತಿ: ‘ಕನ್ನಡ ಪುಸ್ತಕ ಹಾಗೂ ಪತ್ರಿಕೆಗಳನ್ನು ಓದುವ ಮೂಲಕ ಜ್ಞಾನರ್ಜನೆ ಬೆಳೆಸಿಕೊಳ್ಳಿ. ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಕನ್ನಡ ಭಾಷೆ ಅರಿತು ವಿದ್ಯಾವಂತರಾಗಿ, ಸಾಹಿತಿಗಳಾಗಿ ಮುಂದೆ ಬನ್ನಿ’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ ತಿಳಿಸಿದರು.

ನಗರದ ಹಾಲಪ್ಪ ವೃತ್ತದ ಭದ್ರಾ ಪ್ರೌಢಶಾಲೆಯಲ್ಲಿ ಬುಧವಾರ ಕನ್ನಡ ಸಾಹಿತ್ಯ ಪರಿಷತ್ ಮತ್ತು ಭದ್ರಾ ಪ್ರೌಢಶಾಲೆ ಸಹಯೋಗದಲ್ಲಿ ನಡೆದ ದತ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭದ್ರಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಾಲರಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿವಮೊಗ್ಗ ವಿಶ್ರಾಂತ ಬಿಇಒ ಆರ್.ರತ್ನಯ್ಯ, ಭದ್ರಾ ಪ್ರೌಢಶಾಲೆಯ ಎಸ್‌.ಬಿ. ರುದ್ರಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಮಾತನಾಡಿದರು.

ವಿದ್ಯಾರ್ಥಿ ಜುನೇರಾ ಪ್ರಾರ್ಥಿಸಿದರು. ಜಗದೀಶ್ ಪರಿಷತ್ ಎಂ.ಇ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಎಂ.ಎಸ್. ಸುಧಾಮಣಿ ವೆಂಕಟೇಶ್, ನಾಗೋಜಿರಾವ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT