ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಸ್ಕೃತಿಕ ಪರಂಪರೆಯ ಅರಿವಿರಲಿ: ಪಟ್ಟಾಭಿರಾಮ್

ಪ್ರತಿಭಾ ಪುರಸ್ಕಾರದಲ್ಲಿ ಆರ್‌ಎಸ್ಎಸ್ ಮುಖಂಡ ಪಟ್ಟಾಭಿರಾಮ್
Last Updated 19 ಸೆಪ್ಟೆಂಬರ್ 2022, 4:38 IST
ಅಕ್ಷರ ಗಾತ್ರ

ಭದ್ರಾವತಿ: ‘ವಿದ್ಯೆ ಬದುಕಿಗೆ ಪೂರಕವಾಗಿ ಇರುವ ಜತೆಗೆ ಸುತ್ತಲಿನ ಸಮಾಜಕ್ಕೆ ಒಳಿತನ್ನು ಮಾಡುವ ಮೂಲಕ ಸಾಂಸ್ಕೃತಿಕ ಪರಂಪರೆಯ ಚಿಂತನೆ ಹೊಂದಿರಬೇಕು’ ಎಂದು ಆರ್‌ಎಸ್ಎಸ್ ದಕ್ಷಿಣ ಪ್ರಾಂತೀಯ ಸಹ ಕಾರ್ಯವಾಹ ಪಟ್ಟಾಭಿರಾಮ್ಹೇಳಿದರು.

ಕಾಲಭೈರವೇಶ್ವರ ಟ್ರಸ್ಟ್ ನೇತೃತ್ವದಲ್ಲಿ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರುಮಾತನಾಡಿದರು.

‘ಹಿಂದಿನ ಗುರುಕುಲ ಪದ್ಧತಿಯ ಶಿಕ್ಷಣದಲ್ಲಿ ಒಬ್ಬ ಆದರ್ಶ ವಿದ್ಯಾರ್ಥಿಗೆ ಸಿಗಬೇಕಾದ ಎಲ್ಲಾ ರೀತಿಯ ಸದ್ಗುಣಗಳನ್ನು ಕಲಿಸುವ ವ್ಯವಸ್ಥೆ ಇತ್ತು. ಈಗ ವಿದ್ಯೆ ದುಡಿಮೆಯ ಭಾಗ ಎಂದು ಭಾವಿಸಿದ ಪರಿಣಾಮ ವಿದ್ಯಾರ್ಥಿಗಳಲ್ಲಿ ಕಾರ್ಪೋರೇಟ್ ವ್ಯವಸ್ಥೆಯ ಚಿಂತನೆ ಅಡಗಿದೆ. ಇದು ಸಾಮಾಜಿಕ ವ್ಯವಸ್ಥೆಯ ಮೇಲೆ ದುಷ್ಟರಿಣಾಮ ಬೀರುತ್ತಿದೆ’ ಎಂದು ಹೇಳಿದರು.

‘ಭವಿಷ್ಯದಲ್ಲಿ ಸಂಶೋಧನೆ ಮೂಲಕ ಅವಕಾಶಗಳು ಹೆಚ್ಚುವ ಅವಕಾಶವಿದ್ದು, ಇದನ್ನು ಪ್ರತಿಭಾವಂತರು ಸದ್ಬಳಕೆ ಮಾಡಿಕೊಂಡಲ್ಲಿ ದೇಶಕ್ಕೆ ಉತ್ತಮ ಕೊಡುಗೆ ಕೊಡುವ ಅವಕಾಶ ಸಿಗಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಹೇಳಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ. ರವಿ, ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣಗೌಡ, ಉಪಾಧ್ಯಕ್ಷ ಮರಿಯಪ್ಪ, ಪತ್ತಿನ ಸಹಕಾರ ಸಂಘದ ಮಲ್ಲೇಶ್, ನಾಗರಾಜ್, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ಇದ್ದರು.

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವಿದ್ಯಾರ್ಥಿಗಳನ್ನುಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT