ಮಂಗಳವಾರ, ಅಕ್ಟೋಬರ್ 4, 2022
27 °C
ಮಹಿಳಾ ಥ್ರೋ ಬಾಲ್‌, ಟೆನಿಕಾಯ್ಟ್ ಪಂದ್ಯಾವಳಿ

ಸೋತಾಗ ಮೇಲೆತ್ತುವ ಕೈಗಳು ನೀವಾಗಿ: ಮಹಿಳಾ ಥ್ರೋ ಬಾಲ್‌, ಟೆನಿಕಾಯ್ಟ್ ಪಂದ್ಯಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ‘ಬದುಕಿನಲ್ಲಿ ಸಂಸ್ಕಾರವೆಂಬುದು ಅತಿಮುಖ್ಯವಾಗಿದ್ದು ಗೆದ್ದಾಗ ಚಪ್ಪಾಳೆ ತಟ್ಟುವ ಕೈಗಳಿಗಿಂತ ಸೋತಾಗ ಮೇಲೆತ್ತುವ ಕೈಗಳು ನೀವಾಗಿ’ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಹೇಳಿದರು.

ನಗರದಲ್ಲಿ ಬುಧವಾರ ಆರಂಭವಾದ ಎರಡು ದಿನಗಳ ರಾಜ್ಯ ಕಾನೂನು ವಿಶ್ವವಿದ್ಯಾಲಯ ಅಂತರ ಕಾಲೇಜುಗಳ ಮಹಿಳಾ ಥ್ರೋ ಬಾಲ್ ಮತ್ತು ಟೆನಿಕಾಯ್ಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

‘ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬಲ್ಲ ಆತ್ಮವಿಶ್ವಾಸ ಕ್ರೀಡೆ ನೀಡಲಿದೆ. ಸ್ಫರ್ಧೆಗಳಲ್ಲಿ ಶ್ರದ್ಧೆಯಿಂದ ಭಾಗವಹಿಸಿ. ಹಿಂಜರಿಕೆಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸೋಲಿನ ನೋವು ಮನಸ್ಸಿಗೆ ಇಳಿದರೇ ಅಥವಾ ಗೆಲುವು ಅಹಂಕಾರವಾಗಿ ರೂಪಗೊಂಡರೇ ಅದು ಮನುಷ್ಯನ ಅಧೋಗತಿಗೆ ಕಾರಣವಾಗುತ್ತದೆ. ಹಾಗಾಗಿಯೇ ಸಮಾನವಾಗಿ ಎದುರಿಸುವ ಮನೋಸ್ಥೈರ್ಯ ನಿಮ್ಮದಾಗಲಿ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿರು.

ಪ್ರಾಂಶುಪಾಲರಾದ ಪ್ರೊ.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಖಾಲೀದ್ ಖಾನ್, ಸಿ.ಬಿ.ಆರ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎಸ್.ಕಾಂತರಾಜ್ ಇದ್ದರು. ವಿವಿಧ ಜಿಲ್ಲೆಗಳ 16ಕ್ಕೂ ಹೆಚ್ಚು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು