ರಿಪ್ಪನ್ಪೇಟೆ: ‘ಶರಾವತಿ ಮುಳುಗಡೆ ಸಂತ್ರಸ್ತರು ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿ ಕೊಂಡಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಸರ್ಕಾರ ತೆರವು ಗೊಳಿಸುವುದಿಲ್ಲ’ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು.

ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಜೆಜೆಎಂ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ
ಚಾಲನೆ ನೀಡಿ ಅವರು ಮಾತನಾಡಿದರು.

‘ಈ ಭಾಗದ ಭೂ ಹಕ್ಕು ಜ್ವಲಂತ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿದಲ್ಲಿ ಕಠಿಣ ಕಾನೂನು ಶಿಕ್ಷೆಗೆ ಒಳಪಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕವಾಗಿ ಸದೃಢಗೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಆಸರೆಯಾಗಿವೆ ಎಂದರು.

ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು, ಪಿಡಿಒ ಸ್ಥಳೀಯ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.