ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರ್ತು ಸಂದರ್ಭದಲ್ಲಿ ರಕ್ತ: ರೋಟರಿ ರಕ್ತನಿಧಿ ಕೇಂದ್ರದ ಕಾರ್ಯ ಶ್ಲಾಘನೀಯ- ಬೇಳೂರು

Published 3 ನವೆಂಬರ್ 2023, 16:03 IST
Last Updated 3 ನವೆಂಬರ್ 2023, 16:03 IST
ಅಕ್ಷರ ಗಾತ್ರ

ಸಾಗರ: ‘ತುರ್ತು ಸಂದರ್ಭದಲ್ಲಿ ರಕ್ತದ ಕೊರತೆಯನ್ನು ನೀಗಿಸುವ ಮಹತ್ವದ ಕಾರ್ಯವನ್ನು ರೋಟರಿ ರಕ್ತನಿಧಿ ಕೇಂದ್ರ ನಿರ್ವಹಿಸಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಗುರುವಾರ ನಡೆದ ರೋಟರಿ ರಕ್ತನಿಧಿ ಕೇಂದ್ರದ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೇಂದ್ರದ ಸಾಧನೆಗಳ ಕುರಿತು ಪ್ರಕಟಗೊಂಡಿರುವ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಇಲ್ಲಿ ರಕ್ತನಿಧಿ ಕೇಂದ್ರ ಆರಂಭಗೊಳ್ಳುವ ಮುನ್ನ ರಕ್ತದ ತುರ್ತು ಅಗತ್ಯವಿರುವ ರೋಗಿಗಳಿಗೆ ಶಿವಮೊಗ್ಗದಿಂದ ತರಿಸಬೇಕಿತ್ತು. ಇದರಿಂದಾಗಿ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ರೋಟರಿ ಸಂಸ್ಥೆ ಇಲ್ಲಿಯೇ ರಕ್ತನಿಧಿ ಕೇಂದ್ರ ಸ್ಥಾಪಿಸುವ ಸಾಹಸಕ್ಕೆ ಮುಂದಾಗಿದ್ದು ಶ್ಲಾಘನೀಯ’ ಎಂದರು.

‘ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡಿದಾಗ ಮಾತ್ರ ರಕ್ತನಿಧಿ ಕೇಂದ್ರ ಸದೃಢವಾಗಿರಲು ಸಾಧ್ಯ. ಜನ್ಮದಿನ, ಮದುವೆ, ಗಣ್ಯರ ಜನ್ಮದಿನ ಹೀಗೆ ಹಲವು ಆಚರಣೆಗಳ ವೇಳೆ ರಕ್ತದಾನ ಶಿಬಿರ ಆಯೋಜಿಸುವುದು ಸೂಕ್ತ’ ಎಂದು ರೋಟರಿ ಸಂಸ್ಥೆ ಅಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು ಹೇಳಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಮುಖರಾದ ಎಚ್.ಎಂ.ಶಿವಕುಮಾರ್, ಕೆ.ಎನ್.ಶ್ರೀಧರ್, ಬಿ.ಜಿ.ಸಂಗಮ್, ಶಾಂತಕುಮಾರ್ ಇದ್ದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT