ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಪ್ರತಿಭಟನೆ ಹಾಸ್ಯಾಸ್ಪದ: ಬೇಳೂರು ಗೋಪಾಲಕೃಷ್ಣ

Published 22 ಜೂನ್ 2024, 15:56 IST
Last Updated 22 ಜೂನ್ 2024, 15:56 IST
ಅಕ್ಷರ ಗಾತ್ರ

ಹೊಸನಗರ: ಪೆಟ್ರೋಲ್ ಬೆಲೆ ಏರಿಕೆ ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳಿಂದ ಹಿಡಿದು ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದ್ದು, ನಾಗರಿಕರು ಪರಿತಪಿಸುವಂತಾಗಿದೆ. ಹೀಗಿರುವಾಗ ಬಿಜೆಪಿ ಮುಖಂಡರು ರಾಜ್ಯ ಸರ್ಕಾರವನ್ನು ಮಾತ್ರ ಬೆಟ್ಟು ಮಾಡಿ ತೋರಿಸುತ್ತಿದ್ದು, ಅವರ ನಿಜ ಬಣ್ಣ ಬಯಲಾಗಿದೆ ಎಂದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಮೆಚ್ಚಿಕೊಳ್ಳುವ ಮುಖಂಡರು ಕಾಂಗ್ರೆಸ್ ಮೇಲೆ ಕೆಂಡಕಾರುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಗ್ಯಾರಂಟಿ ಯೋಜನೆ ಮುನ್ನಡೆಸುವುದಕ್ಕಾಗಿ ಬೆಲೆ ಏರಿಕೆ ಮಾಡಲಾಗಿದೆ ಎಂಬ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ. ಮೊದಲು ತಮ್ಮ ಪಕ್ಷ ಜಾರಿಗೊಳಿಸಿರುವ ಜನವಿರೋಧಿ ನೀತಿಗಳನ್ನು ಖಂಡಿಸಲಿ. ನಂತರ ರಾಜ್ಯ ಸರ್ಕಾರದ ವಿರುದ್ಧ ಮಾತನಾಡಲಿ. ಕಾರಣವಿಲ್ಲದೆ ಪ್ರತಿಭಟನೆ ನಡೆಸಿದರೆ ನಂಬಲು ಜನರು ಸಿದ್ದರಿಲ್ಲ. ಕೇಂದ್ರ ಸರ್ಕಾರದ ಆಡಳಿತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕೂಡ ಪ್ರತಿಭಟನೆ ಮಾಡಲಿದೆ’ ಎಂದು ಎಚ್ಚರಿಸಿದರು.

ಯಾವ ಆಕಾಂಕ್ಷೆ ಇಲ್ಲ: ತಾಲ್ಲೂಕಿನ ಸಹಕಾರ ಸಂಘ ಸಂಸ್ಥೆಗಳ ಒತ್ತಡಕ್ಕೆ ಮಣಿದು ಡಿಸಿಸಿ ಬ್ಯಾಂಕ್ ನಿರ್ದೇಶಕ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದೇನೆ. ಇದರಲ್ಲಿ ಯಾವುದೇ ಅಧಿಕಾರ, ಹುದ್ದೆ ಆಕಾಂಕ್ಷಿ ನಾನಲ್ಲ. ಸಹಕಾರ ಕ್ಷೇತ್ರದಲ್ಲಿ ಜನರ ಸೇವೆ ಮಾಡುವ ಸದುದ್ದೇಶದಿಂದ ಸ್ಪರ್ಧಿಸಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT