ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರಾ ಜಲಾಶಯ; ಫೆ. 5ರಿಂದ ನದಿಗೆ ನೀರು

Published 1 ಫೆಬ್ರುವರಿ 2024, 15:36 IST
Last Updated 1 ಫೆಬ್ರುವರಿ 2024, 15:36 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಜಯನಗರ ಜಿಲ್ಲೆಯ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಅಂಗವಾಗಿ ಇಲ್ಲಿನ ಭದ್ರಾ ಜಲಾಶಯದಿಂದ ಫೆಬ್ರುವರಿ 5ರ ರಾತ್ರಿ 10 ಗಂಟೆಯಿಂದ ಫೆ. 10ರವರೆಗೆ ಪ್ರತಿ ದಿನ ತುಂಗಭದ್ರಾ ನದಿಗೆ 2,000 ಕ್ಯೂಸೆಕ್‌ನಂತೆ ಒಟ್ಟು 12,000 ಕ್ಯೂಸೆಕ್ ನೀರು ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಲಾಶಯದಿಂದ ನದಿಯ ಮೂಲಕ  ಬ್ಯಾಡಗಿ, ಹಿರೇಕೆರೂರು, ರಾಣೇಬೆನ್ನೂರು, ಹಾವೇರಿ, ಮುಂಡರಗಿ, ಗದಗ– ಬೆಟಗೇರಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಪಟ್ಟಣಗಳಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ಇಳಿಯಕೂಡದು. ದನ–ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ನಿಷೇಧಿಸಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT