ಭದ್ರಾವತಿ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ 3– 4 ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಕಾರಣ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಅಂದಾಜು 40,000 ಕ್ಯುಸೆಕ್ ನೀರು ಒಳಹರಿವು ಹೊಂದಿದ್ದು, ಇಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.

ಇದರಿಂದಾಗಿ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಈ ವರ್ಷ 2ನೇ ಬಾರಿಗೆ ಮುಳುಗಡೆಗೊಂಡಿದೆ.

ಭಾನುವಾರ ರಾತ್ರಿಯಿಂದಲೇ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೋಮವಾರ ಬೆಳಿಗ್ಗೆ ಹೊಸಸೇತುವೆ ಮೇಲೆ ಹರಿಯುತ್ತಿದೆ. ಆದ್ದರಿಂದ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸೇತುವೆ ಎರಡು ಬದಿಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಸಂಚಾರ ನಿಷೇಧಿಸಲಾಗಿದೆ. ಇದರಿಂದ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರು ಹರಸಹಾಸ ಪಡುವಂತಾಗಿದೆ.

ಮಳೆ ಪ್ರಮಾಣ ಹೆಚ್ಚಾದಲ್ಲಿ ನದಿಗೆ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣ ನೀರು ಹೊರ ಬಿಡುವ ಸಾಧ್ಯತೆ ಇದೆ. ಇದರಿಂದಾಗಿ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಳ್ಳಲಿವೆ. ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ನಗರಸಭೆ ಆಡಳಿತಗಳು ಪ್ರವಾಹ ಎದುರಿಸಲು ಸಿದ್ಧತೆಗಳನ್ನು ಕೈಗೊಂಡಿವೆ. ತಗ್ಗು ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.