ಭದ್ರಾವತಿ: ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಲ್ಲಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈಚೆಗೆ ಐವರು ಆರೋಪಿಗಳಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ತಾಲ್ಲೂಕಿನ ಅಂತರಗಂಗೆ ಗ್ರಾಮದ ನವೀನ (25), ಮನು (31), ಸಂತೋಷ (31), ಮಂಜುನಾಥ ವಿ. (33) ಹಾಗೂ ಅಭಿಷೇಕ್ (24) ಶಿಕ್ಷೆಗೊಳಗಾದವರು.

ಇವರು 2023ರ ಜೂನ್ 6ರಂದು ಅದೇ ಗ್ರಾಮದ ಮಹಿಳೆಯೊಬ್ಬರ ಮನೆಗೆ ಅತಿಕ್ರಮವಾಗಿ ಪ್ರವೇಶ ಮಾಡಿ, ಅವರ ಮೇಲೆ ಹಲ್ಲೆ ನಡೆಸಿದ್ದರು. ಅವರನ್ನು ಜಾತಿ ಹೆಸರಿನಲ್ಲಿ ಅವಾಚ್ಯ ಪದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲು ಮಾಡಿದ್ದರು.

ಆರೋಪ ಸಾಬೀತಾದ ಕಾರಣ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ, ಒಟ್ಟು ₹1 ಲಕ್ಷ ದಂಡ ವಿಧಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-1931581881

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.