ಭದ್ರಾವತಿ: ‘ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ’ ಎಂದು ಸಮಾಜ ಸೇವಕ ಎಸ್.ಆರ್. ಜಗದೀಶ್ ಹೇಳಿದರು.

ಇಲ್ಲಿನ ಮಧು ಲ್ಯಾಬೋರೇಟರಿ ವತಿಯಿಂದ ಈಚೆಗೆ ನಡೆದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆಗಳ ಲಾಭ ದೊರಕುವಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ರಂಗಪ್ಪ ವೃತ್ತ ಮತ್ತು ಕೇಶವಪುರ ಬಡಾವಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಾದ ಶರವಣ ಎಸ್., ಲಿಂಗಮ್ಮ, ತಿರುಮಲ, ಲಕ್ಷ್ಮಮ್ಮ, ಲತೇಶ್, ತುಳಸಿ ಅವರನ್ನು ಸನ್ಮಾನಿಸಲಾಯಿತು.

ಮಧು ಲ್ಯಾಬೋರೇಟರಿ ಸಿಬ್ಬಂದಿ ಲೀಲಾವತಿ, ಸಿಂಧು, ನಯನಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-42-1855230762

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.