ಭದ್ರಾವತಿ: ತನ್ನದೇ ಆದ ಸಾಂಸ್ಕೃತಿಕ ಅನನ್ಯತೆ ಹೊಂದಿರುವ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಸಂಶೋಧನೆಗಳು ಆಗಬೇಕು ಎಂದು ಸಂಶೋಧಕ ಆರ್. ಮಧುಸೂದನ್ ಆಗ್ರಹಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ವತಿಯಿಂದ ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಐತಿಹಾಸಿಕ ಗ್ರಂಥಗಳು ಹಾಗೂ ದೇಶದ ವಿವಿಧೆಡೆ ದೊರಕಿರುವ 30 ಶಾಸನಗಳಲ್ಲಿ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಬಗ್ಗೆ ಉಲ್ಲೇಖವಿದೆ. ದೇಶಪ್ರೇಮ, ಪರಾಕ್ರಮಕ್ಕೆ ಹೆಸರುವಾಸಿಯಾದ ಈ ಸಮಾಜದ ಸಾಂಸ್ಕೃತಿಕ ಆಚರಣೆಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಅವಶ್ಯಕತೆಯಿದೆ ಎಂದರು.

ಸಮುದಾಯವು ದೇಶದ ಹಲವು ಭಾಷಾವಾರು ಪ್ರಾಂತ್ಯಗಳಲ್ಲಿ ಬೇರೆ ಹೆಸರುಗಳಲ್ಲಿ ಹರಿದು ಹಂಚಿ ಹೋಗಿದ್ದು, ಅವುಗಳನ್ನು ಒಗ್ಗೂಡಿಸಬೇಕಾಗಿದೆ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್ಗಳಲ್ಲಿ ಸಮುದಾಯದ ಯುವಕರ ದಾಖಲಾತಿ ಪ್ರಮಾಣ ಹೆಚ್ಚು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ಅಧ್ಯಕ್ಷ ಬಿ.ಕೆ. ಶಿವಕುಮಾರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್. ರಾಜು, ಉಪತಹಶೀಲ್ದಾರ್ ಮಂಜಾನಾಯ್ಕ, ಪದಾಧಿಕಾರಿಗಳಾದ ಗಂಗಾ ರೇವಣ್ಣ, ಜಯರಾಮ್, ಕೆ. ಮಾದಯ್ಯ, ಲಕ್ಷ್ಮಮ್ಮ, ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-42-1678046951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.