ಭದ್ರಾವತಿ: ವ್ಯಕ್ತಿಯೋರ್ವನಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಆರೋಪದ ಮೇಲೆ ಸುಣ್ಣದಹಳ್ಳಿ ಗ್ರಾಮದ ನಾಲ್ವರು ಆರೋಪಿಗಳಿಗೆ ಇಲ್ಲಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರ ಮೈಲಸ್ವಾಮಿ ಚೆಟ್ಟಿಯಾರ್ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹ 1.73 ದಂಡ ವಿಧಿಸಿದ್ದಾರೆ.

ಸುಣ್ಣದಹಳ್ಳಿ ಗ್ರಾಮದ ನಿವಾಸಿಗಳಾದ ಜಗದೀಶ್, ಕಾಂತರಾಜು, ನಾಗೇಶ, ಮಂಜುನಾಥ್ ಹಾಗೂ ಪ್ರೇಮ ಶಿಕ್ಷೆಗೊಳಗಾದವರು.

ಘಟನೆ ವಿವರ: ಸುಣ್ಣದಹಳ್ಳಿ ಗ್ರಾಮದಲ್ಲಿ ವಿ. ಆರ್ಮುಗಂ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಸರ್ವೇ ಕಾರ್ಯ ನಡೆಯುವಾಗ ಆರೋಪಿಗಳು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಆರ್ಮುಗಂ ಅವರನ್ನು ಜಾತಿಯ ಹೆಸರಿನಲ್ಲಿ ನಿಂದಿಸಿ ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ಘಟನೆಗೆ ಸಂಬಂಧ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪ ಸಾಬೀತಾದ ಹಿನ್ನಲೆ ನ್ಯಾಯಾಲಯ ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.