ಭದ್ರಾವತಿ: ಬೊಮ್ಮನಕಟ್ಟೆ ಸಮೀಪ ಜಿಂಕೆ ಬೇಟೆಯಾಡಿ ಅದರ ಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಮೂವರನ್ನು ಭಾನುವಾರ ಬಂಧಿಸಿದ್ದಾರೆ.

ಚಂದ್ರಶೇಖರ್, ಮೂರ್ತಿ ಹಾಗೂ ಮುನ್ನಾ ಬಂಧಿತರು. ಪ್ರಮುಖ ಆರೋಪಿ ಆರ್ಮುಗ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ.

ಆರೋಪಿಗಳಿಂದ ಐದು ಪ್ಲಾಸ್ಟಿಕ್ ಕವರ್ಗಳಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು 20 ಕೆ.ಜಿ ಜಿಂಕೆ ಮಾಂಸ ಹಾಗೂ ಎರಡು ಆಟೊಗಳನ್ನು ವಶಪಡಿಸಿಕೊಳ್ಳಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಭದ್ರಾವತಿ ವಲಯ ಅರಣ್ಯಾಧಿಕಾರಿ ರಾಜೇಶ್ ಕೆ.ಆರ್. ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-42-1427462819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.