ಭದ್ರಾವತಿ: ‘ಶಾಸಕ ಬಿ.ಕೆ.ಸಂಗಮೇಶ್ವರ ಅವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯಲಿ’ ಎಂದು ಬಿಳಿಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾ ಜಲಾಶಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಾಗಿನ ಅರ್ಪಣೆ, ಗಂಗಾ ಪೂಜೆ ಹಾಗೂ ನೂತನವಾಗಿ ನಿರ್ಮಾಣಗೊಂಡಿರುವ ಪರಿವೀಕ್ಷಣಾ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಜಾತಿ, ಪಂಥ, ಮತಗಳನ್ನು ಮೀರಿದ ಜಿಲ್ಲೆಯ ಏಕೈಕ ಜನಪ್ರತಿನಿಧಿ ಶಾಸಕ ಬಿ.ಕೆ. ಸಂಗಮೇಶ್ವರ ಎಂದರೆ ತಪ್ಪಾಗಲಾರದು. ಅವರು ಕ್ಷೇತ್ರದಲ್ಲಿ ಶಾಸಕರಾದಾಗಿನಿಂದಲೂ ನಿರಂತರವಾಗಿ ಭದ್ರೆಗೆ ಬಾಗಿನ ಅರ್ಪಿಸುವ ಪುಣ್ಯದ ಕಾರ್ಯ ನೆರವೇರಿಸಿಕೊಂಡು ಬರುತ್ತಿದ್ದಾರೆ’ ಎಂದರು.

‘ಭದ್ರೆಯ ಒಡಲಲ್ಲಿರುವುದು ಕೇವಲ ನೀರಲ್ಲ. ಇದೊಂದು ಅಮೃತ. ಇಂದು ಲಕ್ಷಾಂತರ ಜನರು ಭದ್ರೆಯನ್ನು ಅವಲಂಬಿಸಿದ್ದಾರೆ’ ಎಂದು ನಗರಸಭೆ ಸದಸ್ಯ ಬಿ.ಕೆ.ಮೋಹನ್ ತಿಳಿಸಿದರು.

‘ಪ್ರತಿವರ್ಷ ಶಾಸಕರು ಸರ್ವಧರ್ಮ ಗುರುಗಳ ನೇತೃತ್ವದಲ್ಲಿ ಬಾಗಿನ ಕಾರ್ಯಕ್ರಮ ನೆರವೇರಿಸಿಕೊಂಡು ಬರುತ್ತಿರುವುದು ಮಾದರಿಯಾಗಿದೆ’ ಎಂದು ನಗರದ ಜಾಮಿಯಾ ಮಸೀದಿಯ ಮೌಲಾನ ಖಾದ್ರಿ ಹೇಳಿದರು.

ತಹಶೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್ಕುಮಾರ್, ಡಿವೈಎಸ್ಪಿ ಕೆ.ಆರ್.ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಶಿವಕುಮಾರ್, ಪ್ರಮುಖರಾದ ಎಸ್.ಕುಮಾರ್, ಸಿ.ಎಂ.ಖಾದರ್, ಮಣಿಶೇಖರ್, ಎಚ್. ರವಿಕುಮಾರ್, ಬಿ.ಕೆ. ಜಗನ್ನಾಥ್, ಸೈಯದ್ ರಿಯಾಜ್, ಬಿ.ಎಸ್.ಗಣೇಶ್, ಬಿ.ಎಂ. ರವಿಕುಮಾರ್, ಬಿ.ಎಂ. ಮಂಜುನಾಥ್, ಬಸವೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು.

ಎಚ್.ಎಲ್.ಷಡಾಕ್ಷರಿ ಸ್ವಾಗತಿಸಿ, ಲತಾ ಚಂದ್ರಶೇಖರ್ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಎಂ. ಶಿವಕುಮಾರ್, ಮುಸ್ವೀರ್ ಬಾಷಾ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.