ಭದ್ರಾವತಿ: ‘ಅಸಮಾನತೆ ನಿವಾರಣೆಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಬಿ.ಆರ್. ಅಂಬೇಡ್ಕರ್ ಅವರ ಹೋರಾಟ ಹಾಗೂ ಚಿಂತನೆಗಳ ಬಗ್ಗೆ ಯುವ ಪೀಳಿಗೆಯವರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ’ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಅಭಿಪ್ರಾಯಪಟ್ಟರು.

ತಾಲ್ಲೂಕು ಛಲವಾದಿ ಸಮಾಜದ ವತಿಯಿಂದ ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಹಲವು ಸವಾಲುಗಳನ್ನು ಎದುರಿಸಿ ಶಿಕ್ಷಣ ಪಡೆದ ಅಂಬೇಡ್ಕರ್, ಛಲ ಹಾಗೂ ಸ್ವಾಭಿಮಾನದ ಸಂಕೇತದಂತಿದ್ದರು. ಹೋರಾಟ, ಶಿಕ್ಷಣ ಹಾಗೂ ಸಂಘಟನೆ ಮೂಲಕ ಶೋಷಿತ ಸಮುದಾಯದ ಏಳಿಗೆಗಾಗಿ ದುಡಿದರು. ಬುದ್ಧ, ಬಸವಣ್ಣ, ಅಂಬೇಡ್ಕರ್ ಮೊದಲಾದ ದಾರ್ಶನಿಕರ ವಿಚಾರಧಾರೆಯ ಬಗ್ಗೆ ಪೋಷಕರು ತಮ್ಮ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಇಂದಿನ ಯುವಕರಿಗೆ ಪ್ರೇರಣೆಯಾಗಬೇಕು’ ಎಂದರು.

‘ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆಗಳ ನಿವಾರಣೆ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನದ ಮೂಲ ಆಶಯಗಳಲ್ಲಿ ಒಂದು. ಅವರ ಆಶಯಗಳಿಂದ ಪ್ರೇರಿತವಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಅಲ್ಲದೇ, ಜನಮಾನಸದಲ್ಲಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಬಿತ್ತುವ ಉದ್ದೇಶದಿಂದ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಗೊಳಿಸಲಾಗಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ನರಸಿಂಹಮೂರ್ತಿ ಅವರ ನಿರ್ದೇಶ ನದ ‘ಭಗವಾನ್ ಬುದ್ಧ’ ನಾಟಕ ಪ್ರಸ್ತುತಪಡಿಸಲಾಯಿತು. ಗಾಯಕರಾದ ದಿವಾಕರ್, ತಮಟೆ ಜಗದೀಶ್ ಹಾಗೂ ತಂಡದವರು ಅಂಬೇಡ್ಕರ್ ಕುರಿತ ಗೀತೆಗಳನ್ನು ಹಾಡಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರೀನಾರಾಯಣ, ಸದಸ್ಯ ಚನ್ನಪ್ಪ, ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕ ಕುಂದನ್ ಬಸವರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-42-1659878052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.