ಭದ್ರಾವತಿ: ತಾಲ್ಲೂಕು ಆಡಳಿತದ ವತಿಯಿಂದ ಏಪ್ರಿಲ್ 20ರಂದು ನಗರದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಂಜೆ 5 ಗಂಟೆಗೆ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. 6ಕ್ಕೆ ಅಂಬೇಡ್ಕರ್ ಭವನದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ.ಸಂಗಮೇಶ್ವರ ಅಧ್ಯಕ್ಷತೆ ವಹಿಸುವರು.

ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಬಸವಣ್ಣನವರ ಸಾಧನೆಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಭದ್ರಾವತಿ ತಹಶೀಲ್ದಾರ್ ಪರಸಪ್ಪ ಕುರುಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-42-1925395287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.