ಭದ್ರಾವತಿ: ತಾಲ್ಲೂಕಿನ ಕಾಗೆಹಳ್ಳ ಗ್ರಾಮದ ಹೊರವಲಯದಲ್ಲಿ ಸೋಮವಾರ ಖಾಸಗಿ ಬಸ್ ಸೇತುವೆಯಿಂದ ಉರುಳಿ ಹಳ್ಳಕ್ಕೆ ಬಿದ್ದಿದ್ದರಿಂದ 35 ಮಂದಿ ಗಾಯಗೊಂಡಿದ್ದಾರೆ.

ಘಟನೆ ಮಧ್ಯಾಹ್ನ 1.30 ಗಂಟೆಗೆ ಸಂಭವಿಸಿದೆ. ಅಪಘಾತಕ್ಕೆ ತುತ್ತಾದ ಖಾಸಗಿ ಬಸ್ ದಾವಣಗೆರೆಯಿಂದ ಭದ್ರಾವತಿ ಕಡೆಗೆ ಬರುತ್ತಿತ್ತು. ಗ್ರಾಮದ ಹೊರವಲಯದ ಸಮೀಪ ಹರಿಯುವ ಹಳ್ಳಕ್ಕೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಸಮೀಪ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ಸೇತುವೆಯ ತಡೆಗೋಡೆಗೆ ಬಡಿದು ಕೆಳಗೆ ಉರುಳಿದೆ.

ಅಪಘಾತದಲ್ಲಿ ಬಸ್ ಚಾಲಕ ಹಾಗು ನಿರ್ವಾಹಕ ಸೇರಿ 35 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗು ಭದ್ರಾವತಿಯ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಹಳ್ಳದಲ್ಲಿ ನೀರು ಕಡಿಮೆಯಿದ್ದುದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ಸಂಬಂಧ ಭದ್ರಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.