ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರಾವತಿ: 27ರ ಒಳಗೆ ಪಡಿತರ ವಿತರಿಸಲು ಸೂಚನೆ

Published 15 ಜೂನ್ 2023, 15:38 IST
Last Updated 15 ಜೂನ್ 2023, 15:38 IST
ಅಕ್ಷರ ಗಾತ್ರ

ಭದ್ರಾವತಿ: ತಾಲ್ಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಜೂನ್ ತಿಂಗಳ ಪಡಿತರ ಹಂಚಿಕೆಯನ್ನು 27ರ ಒಳಗಾಗಿ ಮುಕ್ತಾಯಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು ಸೂಚಿಸಿದ್ದಾರೆ.

ಜೂನ್‌ 28ರಿಂದ ಸರ್ವರ್ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪಡಿತರ ಚೀಟಿದಾರರಿಗೆ ಜೂನ್‌ 27ರ ಒಳಗೆ ಪ್ರಸಕ್ತ ತಿಂಗಳ ಆಹಾರ ಧಾನ್ಯ ವಿತರಣೆ/ಹಂಚಿಕೆ ಕಾರ್ಯ ಮುಕ್ತಾಯಗೊಳಿಸುವಂತೆ ಸೂಚಿಸಲಾಗಿದೆ. ಪಡಿತರ ಚೀಟಿದಾರರು ಸಹಕರಿಸಬೇಕು. ಅಲ್ಲದೇ ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT