ಭದ್ರಾವತಿ: ‘ಉತ್ಪಾದನಾ ತಂತ್ರಜ್ಞಾನದಲ್ಲಿ ನಡೆಯುತ್ತಿರುವ ನೂತನ ಆವಿಷ್ಕಾರಗಳ ಬಗ್ಗೆ ಕಾರ್ಮಿಕರಿಗೆ ತರಬೇತಿ ನೀಡುವುದು ಅಗತ್ಯ’ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ತಿಳಿಸಿದರು.

ನಗರದ ಕಾರ್ಮಿಕರ ಸಮುದಾಯ ಭವನದಲ್ಲಿ ಇತ್ತೀಚೆಗೆ ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪೂರ್ವ ಕಲಿಕೆಯ ಮಾನ್ಯತೆ (ಆರ್ಪಿಎಲ್) ಕಾರ್ಯಕ್ರಮದ ಅಡಿಯಲ್ಲಿ ಸುರಕ್ಷತಾ ಕಿಟ್ಗಳ ವಿತರಣೆ ಮತ್ತು ಪ್ರಮಾಣಪತ್ರ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ನಿರಂತರವಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ ಕಾರ್ಮಿಕರ ಕೌಶಲಗಳನ್ನು ಉನ್ನತೀಕರಿಸುವುದು ಅಗತ್ಯ. ಉತ್ಪಾದನೆ ಹೆಚ್ಚಳದ ಜೊತೆಗೆ ಕಾರ್ಮಿಕರ ಸುರಕ್ಷೆ ಹಾಗೂ ಕ್ಷೇಮಾಭಿವೃದ್ಧಿಗೂ ಗಮನ ಕೊಡಬೇಕಿದೆ. ಕಟ್ಟಡ ನಿರ್ಮಾಣ, ಮರಗೆಲಸ, ಪೈಂಟಿಂಗ್ ಮೊದಲಾದ ಕೆಲಸಗಳಲ್ಲಿ ತೊಡಗಿಕೊಂಡಿರುವ ಕಾರ್ಮಿಕರು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಂಘಟನಾತ್ಮಕವಾಗಿ ತಮ್ಮ ಶಾಸನಬದ್ಧ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡಬೇಕು’ ಎಂದರು.

‘ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವ ಗುತ್ತಿಗೆದಾರರು ಕೆಲಸಗಾರರ ಸುರಕ್ಷತೆಗೆ ಒತ್ತು ನೀಡಬೇಕು. ಶ್ರಮದ ಕೆಲಸದಲ್ಲಿ ತೊಡಗಿರುವ ಎಲ್ಲಾ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆಗಳ ಪ್ರಮುಖರು ಒಟ್ಟಾಗಿ ಪ್ರಯತ್ನ ಮಾಡುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ನಗರಸಭೆ ಸದಸ್ಯ ಬಿ.ಕೆ. ಮೋಹನ್, ಚನ್ನಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಕಾರ್ಮಿಕ ಮುಖಂಡರಾದ ಸಂಜೀವ ಕುಮಾರ್, ತ್ಯಾಗರಾಜ್, ವಿ.ವಿನೋದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-42-171734888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.