ಭದ್ರಾವತಿ: ಇಲ್ಲಿನ 22ನೇ ವಾರ್ಡಿನ ಉಜ್ಜನಿಪುರ ಮುಖ್ಯ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಮುಂದಾಗಿರುವ ನಗರಸಭೆ ಸಿಬ್ಬಂದಿ ಇದಕ್ಕಾಗಿ ರಂಗೋಲಿ ಬಿಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.

ಹಲವು ಬಾರಿ ಮನವಿ ಮಾಡಿದರೂ ಕೆಲವರು ಈ ಆವರಣದಲ್ಲಿ ತ್ಯಾಜ್ಯ ಎಸೆಯುತ್ತಿದ್ದರು. ಇತ್ತೀಚೆಗೆ ನಗರಸಭೆ ಸಿಬ್ಬಂದಿ ಈ ಸ್ಥಳವನ್ನು ಸ್ವಚ್ಛ ಮಾಡಿ ರಂಗೋಲಿ ಬಿಡಿಸಿದ್ದರು.

ಹೀಗೆ ಆವರಣದಲ್ಲಿ ಮೂರು ಕಡೆ ರಂಗೋಲಿ ಬಿಡಿಸಿದ್ದಲ್ಲದೇ ಇನ್ನು ಮುಂದೆ ಈ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ₹ 500 ದಂಡ ವಿಧಿಸುವುದಾಗಿ ರಂಗೋಲಿಯಲ್ಲಿ ಬರೆದು ಎಚ್ಚರಿಸಲಾಗಿದೆ.

‘ಕರ್ನಾಟಕ ಮುನ್ಸಿಪಾಲಿಟಿಗಳ ಅಧಿನಿಯಮ 1964ರ ಅಡಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ದಂಡ ವಿಧಿಸಲು ಅವಕಾಶವಿದೆ. ದಂಡ ವಿಧಿಸುವ ಮೊದಲು ಜನರಲ್ಲಿ ಜಾಗೃತಿ ಮೂಡಿಸಲು ಈ ಪ್ರಯೋಗ ಮಾಡಲಾಗಿದೆ’ ಎಂದು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಎಂ. ಪಲ್ಲವಿ ತಿಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಸಂದೇಶ ಸಾರುವ ಕರಪತ್ರಗಳನ್ನು ವಿತರಿಸಲಾಯಿತು.

ನಗರಸಭೆ ಸಮುದಾಯ ಸಂಚಾಲಕರು, ಸಿಬ್ಬಂದಿ ಹಾಗೂ 22ನೇ ವಾರ್ಡಿನ ನಾಗರಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-42-1465410431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.