ಭದ್ರಾವತಿ: ‘ಇಲ್ಲಿನ ಬಿ.ಎಚ್. ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ವಿಭಜಕ ಕಾಮಗಾರಿ ಅವೈಜ್ಞಾನಿಕವಾಗಿದೆ’ ಎಂದು ಆರೋಪಿಸಿ ಜೆಡಿಎಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

‘ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಬೈಪಾಸ್ ವೃತ್ತದವರೆಗೆ ಹಾಲಿ ನಿರ್ಮಿಸಲಾಗಿರುವ ರಸ್ತೆ ವಿಭಜಕಗಳ ವಿನ್ಯಾಸ ಅವೈಜ್ಞಾನಿಕವಾಗಿದೆ. ವಿಭಜಕಗಳ ಹೊರಮೈ ರಸ್ತೆಗೆ ಚಾಚಿಕೊಂಡಿದ್ದು ಅಪಘಾತಗಳಿಗೆ ಕಾರಣವಾಗುತ್ತಿವೆ. ಅಲ್ಲದೇ ವಿಭಜಕಗಳ ನಡುವೆ ವಿದ್ಯುತ್ ದೀಪಗಳ ಕಂಬಗಳನ್ನು ನಿಲ್ಲಿಸಲು ಹಾಕಿರುವ ಕಾಂಕ್ರೀಟ್ ತಳಪಾಯವೂ ರಸ್ತೆಗೆ ಚಾಚಿಕೊಂಡಿದೆ. ಇದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಗುತ್ತಿದೆ. ಸಾರ್ವಜನಿಕರ ವಿರೋಧವಿದ್ದರೂ ಈಗ ಇದೇ ವಿನ್ಯಾಸದಲ್ಲಿ ಹಾಲಪ್ಪ ವೃತ್ತದ ಬಳಿ ರಸ್ತೆ ವಿಭಜಕಗಳನ್ನು ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ಪಕ್ಷದ ಮುಖಂಡ ಅಜಿತ್ ಅಪ್ಪಾಜಿ ಆರೋಪಿಸಿದರು.

‘ಅವೈಜ್ಞಾನಿಕವಾಗಿ ನಡೆಯುತ್ತಿರುವ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಪ್ರತಿಭಟನಕಾರರು ಘೋಷಣೆ ಕೂಗಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-404876116

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.