ಭದ್ರಾವತಿ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಇಲ್ಲಿನ ನಾಲ್ಕನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿ ಈಚೆಗೆ ಆದೇಶಿಸಿದೆ.

ತಾಲ್ಲೂಕಿನ ಇಟ್ಟಿಗೆಹಳ್ಳಿ ಗ್ರಾಮದ ಬಸವರಾಜ್, ಶ್ರುತಿ, ಮಂಜಪ್ಪ ಹಾಗೂ ಮಧು ಶಿಕ್ಷೆಗೊಳಗಾದವರು.

ನಾಲ್ವರು ಅದೇ ಗ್ರಾಮದ ಚಂದ್ರಪ್ಪ ಎಂಬವರ ಜೊತೆ ತೋಟಕ್ಕೆ ಹೋಗುವ ದಾರಿಯ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ತೆಗೆದು, ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಚಂದ್ರಪ್ಪ, 2021ರ ಫೆ.13ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತನ ಪತ್ನಿ ನೀಡಿದ ದೂರಿನ ಮೇಲೆ ಹೊಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೃತನ ಪತ್ನಿಗೆ ₹1 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-42-1354414608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.