ಗುರುವಾರ , ಜನವರಿ 27, 2022
27 °C

ಭದ್ರಾವತಿ: ಸಂಭ್ರಮದ ವೈಕುಂಠ ಏಕಾದಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭದ್ರಾವತಿ: ಕೊರೊನಾ ಆತಂಕದ ನಡುವೆಯೂ ಗುರುವಾರ ನಗರದ ಬಹುತೇಕ ದೇವಾಲಯದಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಏಕಾದಶಿ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಪೂಜೆ ನಡೆಯಿತು.

ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಭೂ ವೈಕುಂಠನಾಥನ ದರ್ಶನದ ವಿಶೇಷ ಅಲಂಕಾರ ಕಂಡುಬಾರದಿದ್ದರೂ ಮುಂಭಾಗದಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀನಿವಾಸ ದೇವರ ಉತ್ಸವ ಮೂರ್ತಿಯ ಅಲಂಕಾರ ಗಮನ ಸೆಳೆಯಿತು.

ಬೆಳಗಿನ ಚಳಿಯನ್ನು ಲೆಕ್ಕಿಸದೆ ನೂರಾರು ಭಕ್ತರು ದೇವಾಲಯ ಪ್ರಾಂಗಣದಲ್ಲಿ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಸಿದ್ಧಾರೂಢನಗರದ ಶ್ರೀನಿವಾಸ ದೇವಾಲಯದಲ್ಲಿ ವೈಕುಂಠ ಏಕಾದಶಿ ನಿಮಿತ್ತ ದೇವರಿಗೆ ಹೂವಿನಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.

ಮಿಲ್ಟ್ರಿಕ್ಯಾಂಪ್‌ನ ಶ್ರೀನಿವಾಸ ದೇವರಿಗೆ ವಿಶೇಷ ರತ್ನಾಭರಣ ಅಲಂಕಾರ ಗಮನ ಸೆಳೆಯಿತು.

ಕಾಗದನಗರದ ನಾಗರಕಟ್ಟೆ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದರ್ಶನ ಪಡೆದರು.

ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು, ಭಕ್ತರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಹಲವೆಡೆ ಜನರು ಅಂತರ ಕಾಯ್ದುಕೊಳ್ಳದೆ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು