ಭದ್ರಾವತಿ: ಇಲ್ಲಿನ ಹೊಸ ಸಿದ್ದಾಪುರದಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡ ವಾರ ಕಳೆಯುವುದರೊಳಗೆ ಅಪಪ್ರಚಾರಕ್ಕೆ ಮನನೊಂದು ಪತ್ನಿ ಸ್ವಾತಿ ಜೆ. (36) ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರ ಪತಿ ಜಗದೀಶ್ ಫೆ. 14ರಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸ್ವಾತಿ ತನ್ನ ತಾಯಿಗೆ ಮೊಬೈಲ್ ಫೋನಿನಲ್ಲಿ ಸಂದೇಶ ಕಳಿಸಿದ್ದು, ತನ್ನ ಪತಿಯ ಮರಣದ ನಂತರ ಮೋಹನ್ ಎಂಬ ಹೆಸರಿನ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಬಗ್ಗೆ ಅಪಪ್ರಚಾರ ನಡೆಸಿದ್ದು ಹಾಗೂ ತನಗೆ ದೂರವಾಣಿ ಕರೆ ಮಾಡಿ ನಿಂದಿಸಿದ್ದು ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ತಂದೆ- ತಾಯಿ ಇಬ್ಬರನ್ನು ಕಳೆದುಕೊಂಡ ಇಬ್ಬರು ಮಕ್ಕಳು ಈಗ ಅನಾಥರಾಗಿದ್ದಾರೆ.

ಸ್ವಾತಿಯ ತಾಯಿ ನೀಡಿರುವ ದೂರು ಆಧಾರದಲ್ಲಿ ನ್ಯೂ ಟೌನ್ ಪೊಲೀಸರು ಮೋಹನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.