ಭದ್ರಾವತಿ: ‘ಮಹಿಳೆಯರು ತಮ್ಮ ಸಬಲೀಕರಣಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಖಜಾನೆ ಇಲಾಖೆಯ ಉಪನಿರ್ದೇಶಕಿ ಸಾವಿತ್ರಿ ಎಚ್.ಎಸ್. ಹೇಳಿದರು.

ನಗರಸಭೆ ವತಿಯಿಂದ ಇಲ್ಲಿನ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಈಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು.

‘ಮಹಿಳೆಯರು ಕುಟುಂಬದ ಜವಾಬ್ದಾರಿಗಳನ್ನು ನಿರ್ವಹಿಸಿ, ಉದ್ಯೋಗ ಕ್ಷೇತ್ರದಲ್ಲೂ ಕ್ರಿಯಾಶೀಲವಾಗುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಮಹತ್ತರ ಕೊಡುಗೆ ನೀಡುತ್ತಿದ್ದಾರೆ. ಆದ್ದರಿಂದ ಮಹಿಳೆಯರನ್ನು ಅಬಲೆ ಎಂದು ನೋಡುವ ಸಮಾಜದ ದೃಷ್ಟಿಕೋನದಲ್ಲಿ ಬದಲಾವಣೆ ಅಗತ್ಯ’ ಎಂದು ತಿಳಿಸಿದರು.

‘ಮಹಿಳೆಯರು ಸಂಘಟಿತರಾಗುವುದರ ಮೂಲಕ ಹಕ್ಕುಗಳ ರಕ್ಷಣೆಗೆ ಹೋರಾಡಬೇಕು’ ಎಂದು ನಗರಸಭೆ ಸದಸ್ಯ ಬಿ.ಕೆ. ಮೋಹನ್ ಹೇಳಿದರು.

ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾ ರಾಜಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಪೌರಾಯುಕ್ತ ಕೆ.ಎನ್. ಹೇಮಂತ್, ನಗರಸಭೆಯ ಮಹಿಳಾ ಸಿಬ್ಬಂದಿ, ಮಹಿಳಾ ಪೌರಕಾರ್ಮಿಕರು ಪಾಲ್ಗೊಂಡಿದ್ದರು. ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-42-1827844810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.