ಸಾಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದ ಪ್ರಕರಣದಲ್ಲಿ ಬೈಕ್ ಸವಾರನ ಸಾವಿಗೆ ಕಾರಣನಾದ ಕಾರಿನ ಚಾಲಕನಿಗೆ ಜೆಎಂಎಫ್ಸಿ ನ್ಯಾಯಾಲಯ ಒಂದೂವರೆ ವರ್ಷ ಜೈಲು ಶಿಕ್ಷೆ, ₹ 9 ಸಾವಿರ ದಂಡ ವಿಧಿಸಿದೆ.

2018ರ ಜ. 14ರಂದು ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದ ಗಿರೀಶ್ ಎಂಬುವವರು ತಮ್ಮ ಕಾರನ್ನು ಅತೀ ವೇಗದಿಂದ ಚಲಾಯಿಸಿದ್ದ ಕಾರಣ ಶಿವಮೊಗ್ಗ ರಸ್ತೆಯ ತ್ಯಾಗರ್ತಿ ಕ್ರಾಸ್ ಹತ್ತಿರ ಚೇತನ್ ರೋಡ್ರಿಗ್ರಸ್ ಎಂಬುವವರು ಬೈಕ್ಗೆ ಡಿಕ್ಕಿ ಹೊಡೆದಿದ್ದರು. ಈ ಅಪಘಾತದಲ್ಲಿ ಚೇತನ್ ಮೃತ ಪಟ್ಟಿದ್ದರು.

ಈ ಸಂಬಂಧ ನಗರ ಠಾಣೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಮಾದೇಶ್ ಎಂ. ಶಿಕ್ಷೆ ವಿಧಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಚಂದ್ರಶೇಖರ್ ಎಚ್.ಎಸ್. ವಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.