ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾವತಿ | ಕಟ್ಟಡಕ್ಕೆ ಡಿಕ್ಕಿ: ಬೈಕ್‌ ಸವಾರ ಸಾವು

Published 29 ನವೆಂಬರ್ 2023, 14:02 IST
Last Updated 29 ನವೆಂಬರ್ 2023, 14:02 IST
ಅಕ್ಷರ ಗಾತ್ರ

ಭದ್ರಾವತಿ: ಇಲ್ಲಿನ ವಿಐಎಸ್‌ಎಲ್ ಡಬಲ್ ರಸ್ತೆಯಲ್ಲಿ ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್‌ ಕಟ್ಟಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಹೊಸಮನೆ ಒಎಸ್‌ಎಂ ರಸ್ತೆ ನಿವಾಸಿ ಶಶಿಕುಮಾರ್ (45) ಮೃತ ವ್ಯಕ್ತಿ. ಶಶಿಕುಮಾರ್ ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. 

ವಿಐಎಸ್‌ಎಲ್ ಡಬಲ್ ರಸ್ತೆಯಲ್ಲಿ ವಿದ್ಯುತ್ ಕಂಬ ಅಳವಡಿಸಲು ಕಾಮಗಾರಿ ನಡೆಯುತ್ತಿದ್ದು, ಶಶಿಕುಮಾರ್ ರಾತ್ರಿ ಸಿಡಿಲು ಸಹಿತ ಮಳೆ ಬರುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT