ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆಹೊನ್ನೂರು | ಕಾಲುವೆಗೆ ಬಿದ್ದು ಬೈಕ್ ಸವಾರ ಸಾವು

Published 23 ಏಪ್ರಿಲ್ 2024, 14:47 IST
Last Updated 23 ಏಪ್ರಿಲ್ 2024, 14:47 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಪಟ್ಟಣದ ಸಮೀಪ ಬೈಕ್ ಸವಾರರೊಬ್ಬರು ಬೈಕ್‌ನೊಂದಿಗೆ ಆಯತಪ್ಪಿ ಕಾಲುವೆಗೆ ಬಿದ್ದು, ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 

ದಾಸರಕಲ್ಲಹಳ್ಳಿಯ ನೀಲಪ್ಪ (32) ಮೃತ ವ್ಯಕ್ತಿ. ಬೆಳಿಗ್ಗೆ 10 ಗಂಟೆ ವೇಳೆಗೆ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರಿಗೆ ಹೋಗುತ್ತಿರುವಾಗ ಪಟ್ಟಣದ ಸಮೀಪ ಬೈಕ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದಾರೆ. ತಕ್ಷಣವೇ ಪಟ್ಟಣದ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ತೆರಳುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT