ರಾಜ್ಯದ ಎಲ್ಲೆಡೆ ಜೀವವೈವಿಧ್ಯ ಜಾಗೃತಿ ಅಭಿಯಾನ

ಸಾಗರ: ರಾಜ್ಯದ ಎಲ್ಲ ಭಾಗಗಳಲ್ಲಿ ಜೀವವೈವಿಧ್ಯ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ರಾಜ್ಯ ಜೀವವೈವಿಧ್ಯ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಾಗೃತಿ ಅಭಿಯಾನಕ್ಕೆ ಜುಲೈ 1ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಈ ಅಭಿಯಾನ ಆಗಸ್ಟ್ 15ರವರೆಗೂ ನಡೆಯಲಿದೆ’ ಎಂದು ಮಾಹಿತಿ ನೀಡಿದರು.
ಸಾಗರ, ಹೊಸನಗರ, ತೀರ್ಥಹಳ್ಳಿ, ಸೊರಬ ತಾಲ್ಲೂಕುಗಳಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಸಂಬಂಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇರುವ ಜೀವವೈವಿಧ್ಯ ಸಮಿತಿಗಳಿಗೆ ಪುನಶ್ಚೇತನ ನೀಡಲು ತೀರ್ಮಾನಿಸಲಾಗಿದೆ. ಸ್ಥಳೀಯ ಗ್ರಾಮ ಅರಣ್ಯ ಸಮಿತಿಗಳ ನೆರವು ಪಡೆದು ಆಯಾ ಗ್ರಾಮಗಳ ಕೆರೆಕಟ್ಟೆ, ಕಾನು, ಅರಣ್ಯ, ಗೋಮಾಳ ಸಂರಕ್ಷಣೆಯತ್ತ ಗಮನ ನೀಡಲಾಗುತ್ತದೆ ಎಂದು ಅವರು
ತಿಳಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ವಿನಾಶದ ಅಂಚಿನಲ್ಲಿರುವ ಅನೇಕ ವೃಕ್ಷಗಳ ಕುರಿತು ಮಾಹಿತಿ ಸಂಗ್ರಹಿಸಿ ಪಟ್ಟಿ ಮಾಡಲಾಗಿದೆ. ಇದರ ಜೊತೆಗೆ ಔಷಧೀಯ ಸಸ್ಯಗಳು, ದೇವರ ಕಾಡುಗಳ ದಾಖಲೀಕರಣ ನಡೆಯುತ್ತಿದೆ. ವಿಶೇಷ ವೃಕ್ಷಗಳು ಇರುವ ಪ್ರದೇಶಕ್ಕೆ ಜೈವಿಕ ಅರಣ್ಯ ಎಂದು ನಾಮಕರಣ ಮಾಡುವ ಮೂಲಕ ಆ ಪ್ರದೇಶದ ರಕ್ಷಣೆ ಒತ್ತು ನೀಡಲಾಗುವುದು ಎಂದು
ಹೇಳಿದರು.
ರಾಜ್ಯ ಜೀವವೈವಿಧ್ಯ ಮಂಡಳಿ ಸದಸ್ಯ ಕವಲಕೋಡು ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಾ ಎಂ.ಕಮ್ಮಾರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.