ಭಾನುವಾರ, ಜುಲೈ 25, 2021
28 °C

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಬಿಎಸ್‌ಪಿ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದು ರಾಜ್ಯದ ರೈತ ಸಮುದಾಯಕ್ಕೆ ಮಾರಕ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಶಿವಪ್ಪ ಆರೋಪಿಸಿದರು.

ರೈತರಲ್ಲದವರು ಭೂಮಿ ಖರೀದಿಸುವ ಕಾನೂನು ಮಾಡಿದರೆ ರೈತ ಸಂಕುಲ ನಾಶವಾಗುತ್ತದೆ. ಆಹಾರ ಭದ್ರತೆಗೆ ಅಪಾಯವಾಗುತ್ತದೆ. ಈ ತಿದ್ದುಪಡಿಗೆ ರಾಜ್ಯಪಾಲರು ಸಹಿ ಹಾಕಸೆ ವಾಪಸ್ ಕಳುಹಿಸಬೇಕು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ರೈತರಲ್ಲದವರು ಕೃಷಿ ಭೂಮಿ ಖರೀದಿಸಲು ಈ ಹಿಂದೆ ಇದ್ದ ₨ 25 ಲಕ್ಷ ಆದಾಯ ಮಿತಿ ತೆಗೆದು ಹಾಕಿರುವುದು ಉಳುವವನೇ ಭೂ ಒಡೆಯ ಕಾಯ್ದೆಗೆ ವಿರುದ್ಧವಾಗಿದೆ. ಸಾಮಾಜಿಕ ಕಲ್ಪನೆಯಲ್ಲಿ ಉಳುವವನಿಗೆ ಭೂಮಿ ಕೊಡುವುದು, ಒಬ್ಬ ರೈತ ಜಮೀನು ಹೊಂದಲು ಮಿತಿ ಹಾಕುವು ನ್ಯಾಯ ಸಮಂಜಸ.  ಹಣ ಉಳ್ಳವರು, ಬಹುತೇಕ ಕಪ್ಪು ಹಣವಿರುವ ಭ್ರಷ್ಟ ರಾಜಕಾರಣಿಗಳು, ಅಧಿಕಾರಿಗಳು, ವ್ಯಾಪಾರಸ್ಥರು, ದೊಡ್ಡ ದೊಡ್ಡ ಉದ್ದಿಮೆದಾರರಿಗೆ ಈ ಕಾಯ್ದೆ ಅನುಕೂಲ ಮಾಡಿಕೊಟ್ಟಿದೆ. ಕೂಡಲೇ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಚ್.ಎನ್.ಶ್ರೀನಿವಾಸ್, ಡಿ.ರವಿ, ಸಿ.ಕೃಷ್ಣಪ್ಪ, ಸಿದ್ದೇಶ್, ಮಾರುತಿ, ಲಕ್ಷ್ಮೀಪತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು