ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ: ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿ

ಫಾಲೋ ಮಾಡಿ
Comments

ಭದ್ರಾವತಿ: ಎರಡು ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮಧ್ಯದ ಘರ್ಷಣೆ ಹಿನ್ನೆಲೆಯಲ್ಲಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.

ಕನಕ ಮಂಟಪದಲ್ಲಿ ಭಾನುವಾರ ರಾತ್ರಿ ನಡೆದ ಕಬಡ್ಡಿ ಪಂದ್ಯಾವಳಿಯ ನಂತರ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದು ಪರಸ್ಪರ ದೂರು–ಪ್ರತಿದೂರು ದಾಖಲಾಗಿದ್ದವು. ನಂತರ ಸರಣಿ ಪ್ರತಿಭಟನೆಗಳು ನಡೆದಿದ್ದವು.

ಮುಂಜಾಗ್ರತಾ ಕ್ರಮವಾಗಿ 48 ಗಂಟೆಗಳು ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಸಂತೋಷ್‌ಕುಮಾರ್ ಆದೇಶ ಹೊರಡಿಸಿದ್ದಾರೆ. ಹಾಗಾಗಿ, ಮಾರಕಾಸ್ತ್ರ ಹಿಡಿಯುವುದು, ಗುಂ‍ಪುಗೂಡಿ ಪ್ರತಿಭಟನೆ ನಡೆಸುವಂತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT